News

ಹಾಡಹಗಲೇ ವಕೀಲೆ ಭೀಕರ ಹತ್ಯೆ

Share It

ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿ ವಕೀಲೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಮಜತ್ ಸುಲ್ತಾನ್ (35) ಎಂಬವರನ್ನು ಭೀಕರ ಹತ್ಯೆ ಮಾಡಲಾಗಿದೆ.

ನಿನ್ನೆ ಮಜತ್ ಸುಲ್ತಾನ್ ಬೈಕ್‌ ನಲ್ಲಿ ಹೋಗುವಾಗ ಕಾರ್‌ ನಿಂದ ಗುದ್ದಿ ಕೆಳಗೆ ಬಿದ್ದಾಗ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ನಗರದ ಜಂಜಂ ಕಾಲೋನಿ ನಿವಾಸಿಯಾಗಿದ್ದ ಮಜತ್ ಸುಲ್ತಾನ್, ಸಾಮಾಜಿಕ ಕಾರ್ಯಕರ್ತೆ ಹಾಗೂ ನ್ಯಾಯವಾದಿಯಾಗಿ ಕೆಲಸ ಮಾಡುತ್ತಿದ್ದರು. ಪತ್ನಿ ಕೊಲೆಗೆ ಆಸ್ತಿ ವಿವಾದವೇ ಕಾರಣ ಎಂದಿರುವ ಪತಿ ಸದ್ದಾಂ, ಕೊಲೆಯನ್ನು ಅಜೀಮ್ ಗೌಂಡಿ, ವಸೀಮ್ ಗೌಂಡಿ, ನಯೀಮ್ ಮತ್ತು ನದೀಮ್ ಸೇರಿ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿದ್ದರಿಂದ ಸದ್ದಾಂ ದಂಪತಿ ತಮ್ಮ ವಾಸ್ತವ್ಯವನ್ನು ಪಕ್ಕದ ಬಡಾವಣೆಗೆ ಶಿಫ್ಟ್ ಮಾಡಿದ್ದರು. ನಿನ್ನೆ ಮನೆ ಖಾಲಿ ಮಾಡಿಕೊಂಡು ವಸ್ತುಗಳನ್ನು ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದರು. ಈ ವಾಹನದ ಹಿಂದೆ ಮಜತ್ ಸುಲ್ತಾನ್ ಬೈಕ್ ನಲ್ಲಿ ಹೋಗುವಾಗ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಚೇತನ್ ಆರ್, ಡಿಸಿಪಿ ಆಡೂರು ಶ್ರೀನಿವಾಸಲು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಂಡದವರು ಸಹ ಆಗಮಿಸಿ ಸ್ಥಳ ಪರಿಶೀಲನೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.


Share It

You cannot copy content of this page