News

ಭೂ ವ್ಯಾಜ್ಯ: 3 ತಿಂಗಳಲ್ಲಿ ಇತ್ಯರ್ಥಪಡಿಸಲು ಆದೇಶ

Share It

ಬೆಂಗಳೂರು: ಕಂದಾಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಭೂ ವ್ಯಾಜ್ಯಗಳನ್ನು ಮೂರು ತಿಂಗಳ ಒಳಗೆ ತ್ವರಿತವಾಗಿ ಇತ್ಯರ್ಥಪಡಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಅಲ್ಲದೇ, ಪ್ರಕರಣದ ವಿಚಾರಣೆ ಪೂರ್ಣಗೊಂಡ ನಂತರ ಆದೇಶವನ್ನು ದೀರ್ಘ ಕಾಲದವರೆಗೆ ಕಾಯ್ದಿರಿಸದೆ 15 ದಿನಗಳ ಒಳಗೆ ಪ್ರಕಟಿಸಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಪ್ರತಿ ತಿಂಗಳು ಎಷ್ಟು ವ್ಯಾಜ್ಯಗಳನ್ನು ಇತ್ಯರ್ಥಪಡಿಸಲಾಗಿದೆ ಎಂಬುದರ ಕುರಿತು ಪರಿಶೀಲಿಸಿ ವರದಿ ನೀಡುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ.

ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಪ್ರಕರಣಗಳು ಬಾಕಿ ಉಳಿದಿವೆ. ತಹಶಿಲ್ದಾರ್ ಮತ್ತು ಉಪವಿಭಾಗಾಧಿಕಾರಿ ಹಂತದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಬಾಕಿ ಇವೆ. 2 ರಿಂದ 5 ವರ್ಷಗಳ ದೀರ್ಘಕಾಲದ ಕೇಸುಗಳು ಕೂಡ ಹಾಗೆಯೇ ಉಳಿದಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಭೂ ವ್ಯಾಜ್ಯ ಪ್ರಕರಣಗಳನ್ನು ಮೂರು ತಿಂಗಳಲ್ಲಿ ಇತ್ಯರ್ಥಪಡಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.


Share It

You cannot copy content of this page