ಸುದ್ದಿ

ಖಾತೆ ಮಾಡಿಕೊಡಲು ಲಂಚ: ಗ್ರಾಪಂ ಕಾರ್ಯದರ್ಶಿ ಬಂಧನ

Share It

ನಿವೇಶನದ ಖಾತೆ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಯೋಗೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತಾಲೂಕಿನ ಅಬ್ಬಲಗೆರೆ ಗ್ರಾ.ಪಂ. ಕಾರ್ಯದರ್ಶಿ ಗ್ರೇಡ್ -2 ಯೋಗೇಶ್ ಬಂಧನಕ್ಕೆ ಒಳಗಾದವರು. ಶಿವಮೊಗ್ಗದ ಯಶವಂತ ಎಂಬುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಬಂದಿಸಿದ್ದಾರೆ.

ದೂರುದಾರ ಯಶವಂತ ಗ್ರಾ.ಪಂ. ವ್ಯಾಪ್ತಿಯಲ್ಲಿರುವ 10 ಗುಂಟೆ ಜಾಗವನ್ನು ತಮ್ಮ ತಂದೆ ಹೆಸರಿನಿಂದ ತಮ್ಮ ಹೆಸರಿಗೆ ಖಾತೆ ಮಾಡಿಕೊಡಲು 6 ತಿಂಗಳ ಹಿಂದೆ ಅಬ್ಬಲಗೆರೆ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರು. ಪಂಚಾಯತಿ ಕಾರ್ಯದರ್ಶಿ ಯಶವಂತ ಖಾತೆ ಮಾಡಿಕೊಡಲು 15 ಸಾವಿರ ರೂಪಾಯಿ ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಈ ಕುರಿತು ಯಶವಂತ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ ಯೋಗೇಶ್ ಅಬ್ಬಲಗೆರೆ ಪಂಚಾಯಿತಿ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.


Share It

You cannot copy content of this page