News

ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ವಿರುದ್ಧ ಕೊಲೆ ಯತ್ನ ಆರೋಪದಡಿ ಕೇಸ್ ದಾಖಲು

Share It

ಕಲ್ಕತ್ತಾ: ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿ ಹಾಗೂ ಬಿಜೆಪಿಯ ಲೋಕಸಭಾ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ವಿರುದ್ಧ ಕೊಲೆ ಯತ್ನ ಆರೋಪದಡಿ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಮತ್ತು ಬಿಜೆಪಿ ಯುವ ಮೋರ್ಚಾ ನಾಯಕ ಪ್ರಶಾಂತ್ ದಾಸ್ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 ಮತ್ತು 27ರ ಅಡಿ ಎಫ್ಐಆರ್ ದಾಖಲಿಸಲಾಗಿದೆ.

ಇತ್ತೀಚೆಗೆ ಪಶ್ಚಿಮ ಬಂಗಾಳ ಹೈಕೋರ್ಟ್ ಆದೇಶದಿಂದಾಗಿ ಅಕ್ರಮವಾಗಿ ನೇಮಕಗೊಂಡಿದ್ದ ಅಲ್ಲಿನ ಸಾವಿವಾರು ಶಿಕ್ಷಕರು ಕೆಲಸ ಕಳೆದುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನಾ ನಿರತರ ಮೇಲೆ ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಅವರೊಟ್ಟಿಗೆ ಮೆರವಣಿಗೆಯಲ್ಲಿ ಬಂದವರು ದಾಳಿ ನಡೆಸಿ, ಹಲ್ಲೆ ಮಾಡಿದ್ದಾರೆ ಎಂದು ತೃಣಮೂಲ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಮೈದುಲ್ ಇಸ್ಲಾಂ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗಂಗೋಪಾಧ್ಯಾಯ ಇದೊಂದು ಸುಳ್ಳು ಪ್ರಕರಣ, ನಮಗೆ ಆತಂಕವಿಲ್ಲ. ಪ್ರಕರಣ ದಾಖಲಿಸಿದವರ ವಿರುದ್ಧ ಹಲವು ಕೇಸುಗಳು ಬಾಕಿ ಇವೆ ಎಂದಿದ್ದಾರೆ.


Share It

You cannot copy content of this page