ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುವ ವಿಚಾರಕ್ಕೆ ಸಂಬಂಧಿಸದಂತೆ ಹೈಕೋರ್ಟ್ ನಿಯಮವನ್ನು ಪರಿಷ್ಕರಿಸಿದೆ.
ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ಆದೇಶಾನುಸಾರ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಜನರಲ್ ಭರತ್ ಕುಮಾರ್ ಅಧಿಸೂಚನೆ ಪ್ರಕಟಿಸಿದ್ದಾರೆ.
ಇನ್ನು ಮುಂದೆ ಕಲಬುರಗಿ ಮತ್ತು ಧಾರವಾಡ ಪೀಠಗಳ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳ ವ್ಯಾಪ್ತಿಯಲ್ಲಿ ಉದ್ಭವಿಸುವ ಪಿಐಎಲ್ ಅರ್ಜಿಗಳನ್ನು ಆಯಾ ಪೀಠಗಳಲ್ಲೇ ಸಲ್ಲಿಸುವಂತೆ ಸೂಚಿಸಲಾಗಿದೆ. ಆದಾಗ್ಯೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಬೆಂಗಳೂರು ಪ್ರಧಾನ ಪೀಠದಲ್ಲಿ ಹೈಬ್ರಿಡ್ ಮೋಡ್ ಮೂಲಕ ನಡೆಸಲಾಗುವುದು ಎಂದು ತಿಳಿಸಲಾಗಿದೆ.
ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿನ ಫೈಲಿಂಗ್ ಕೌಂಟರ್‌ಗಳಲ್ಲಿ ಮತ್ತು ಪರಿಶೀಲನಾ ಶಾಖೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಆಯಾ ಪೀಠಗಳ ನ್ಯಾಯವ್ಯಾಪ್ತಿಯ ಜಿಲ್ಲೆಗಳಿಂದ ಉದ್ಭವಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ಅಲ್ಲಿನ ಫೈಲಿಂಗ್ ಕೌಂಟರ್‌ನಲ್ಲಿ ಸ್ವೀಕರಿಸಬೇಕು. ಅವುಗಳನ್ನು ನೋಂದಾಯಿಸಿ ಮತ್ತು ಸ್ಕ್ರೂಟಿನಿ ಮಾಡಬೇಕು. ಬಳಿಕ ಅವುಗಳನ್ನು ವಿಚಾರಣೆಗಾಗಿ ಬೆಂಗಳೂರಿನ ಪ್ರಧಾನ ಪೀಠಕ್ಕೆ ವರ್ಗಾಯಿಸಬೇಕು ಎಂದು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಹೈಕೋರ್ಟ್ ನೋಟಿಫಿಕೇಷನ್ ವೀಕ್ಷಿಸಿ