ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ಅಭಿಯೋಜಕರ ಸಂಘದ ಅಧ್ಯಕ್ಷರಾಗಿ ಹಿರಿಯ ಸರ್ಕಾರಿ ಅಭಿಯೋಜಕ ಅಶ್ವತ್ಥ ನಾರಾಯಣಗೌಡ ಅವರು ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಸಂಘಕ್ಕೆ ನಡೆದಿದ್ದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಶ್ವತ್ಥನಾರಾಯಣಗೌಡ, ಉಪಾಧ್ಯಕ್ಷರಾಗಿ ಜೆ. ರಾಘವೇಂದ್ರ, ಕಾರ್ಯದರ್ಶಿಯಾಗಿ ಸವಿತಾ ಪಾಟೀಲ್, ಜಂಟಿ ಕಾರ್ಯದರ್ಶಿಯಾಗಿ ಗುರುಸ್ವಾಮಿ, ಖಜಾಂಚಿಯಾಗಿ ಜೆ.ಆರ್ ರಮೇಶ್ ಆಯ್ಕೆಯಾಗಿದ್ದಾರೆ.
ಸಂಘದ ನೂತನ ಪದಾಧಿಕಾರಿಗಳಿಗೆ ವಕೀಲರು ಹಾಗೂ ಅಭಿಯೋಜಕರು ಅಭಿನಂದನೆ ಸಲ್ಲಿಸಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪಬ್ಲಿಕ್ ಪ್ರಾಸಿಕ್ಯೂಟರ್ ಅಶ್ವತ್ಥನಾರಾಯಣಗೌಡ ಅವರು ತಮ್ಮ ಆಯ್ಕೆಗೆ ಸಹಕಾರ ನೀಡಿದ ಎಲ್ಲಿರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.